24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ವಿಧಿವಶ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ : ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!