29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ: ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: 18 ನೇ ಲೋಕಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಎನ್.ಡಿ.ಎ. ಗೆ ಪೂರ್ಣ ಬಹುಮತ ಸಿಕ್ಕಿದ್ದು ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಂತಸ ವ್ಯಕ್ತಪಡಿಸಿದ್ದಾರೆ.


ವಿಪಕ್ಷಗಳ ಬಹುನಿರೀಕ್ಷಿತ ಅಪಪ್ರಚಾರ, ಷಡ್ಯಂತ್ರಗಳ ನಡುವೆಯೂ ಎನ್.ಡಿ.ಎ. ಲೋಕಸಭೆಯ ಮ್ಯಾಜಿಕ್ ಸಂಖ್ಯೆಯನ್ನು ದಾಟಿದೆ. ಬಿಜೆಪಿಯೊಂದಿಗಿನ ಅದರ ಮಿತ್ರಪಕ್ಷಗಳು ಸುಭದ್ರ ಸರಕಾರದ ರಚನೆಗೆ ಸಹಯೋಗ ನೀಡಲಿದ್ದು ಮುಂದಿನ ಐದುವರ್ಷಗಳವರೆಗೆ ಮತ್ತೆ ಕಾಂಗ್ರೇಸೇತರ ಸರಕಾರ ಅಧಿಕಾರಕ್ಕೆ ಬರಲಿದೆ.


ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಮಂಗಳೂರು ಲೋಕಸಭಾಕ್ಷೇತ್ರದಲ್ಲಿ ಕ್ಯಾ. ಬ್ರಿಜೇಶ್ ಚೌಟ ಅವರು 1.49 ಲಕ್ಷ ಮತಗಳ ಅಂತರದಿಂದ ವಿಜಯಗಳಿಸಿರುವುದಕ್ಕೆ ಅಭಿನಂದನೆಗಳನ್ನು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!