25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ: ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಬಿ ಒಕ್ಕೂಟ, ಪೃಥ್ವಿ ಜುವೆಲರ್ಸ್ ಬೆಳ್ತಂಗಡಿ, ಸಹಯೋಗದಲ್ಲಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ನಡೆಸಲಾಯಿತು.

ಶಾಲಾಮುಖ್ಯೋಪಾಧ್ಯಾಯರಾದ ಸೂರ್ಯನಾರಾಯಣರವರು ಪರಿಸರ ದಿನಾಚರಣೆಯ ಮಹತ್ವ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ಯೋಜನಾಧಿಕಾರಿ ಸುರೇಂದ್ರ ರವರು ಮಾತನಾಡಿ ಪರಿಸರ ದಿನಾಚರಣೆ ಪ್ರಯುಕ್ತ ಇಂದು ನಾವು ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಮೂವತ್ತಕ್ಕೂ ಹೆಚ್ಚು ಗಿಡಗಳನ್ನು ಶಾಲಾ ಮೈದಾನದ ಸುತ್ತ ನಾಟಿ ಮಾಡಿರುತ್ತೇವೆ, ರಸ್ತೆ ಅಗಲೀಕರಣ ,ಕಟ್ಟಡ ನಿರ್ಮಾಣ, ಕೃಷಿ ಮುಂತಾದ ಉದ್ದೇಶಗಳಿಗಾಗಿ ಪರಿಸರ ನಾಶವಾಗುತ್ತಿದೆ ಕಾಡು ಪ್ರಾಣಿಗಳು ಆಹಾರಕ್ಕಾಗಿ ನಾಡಿಗೆ ಬರುವ ಸುದ್ದಿಗಳನ್ನು ಇಂದು ನಾವು ಸಮೂಹ ಮಾಧ್ಯಮಗಳಲ್ಲಿ ಆಗಾಗ ಕೇಳುತ್ತಿರುತ್ತೇವೆ, ಕಾಡು ನಾಶ ಆಗುತ್ತಿದ್ದು ನಾವು ಕಾಡನ್ನು ಉಳಿಸಬೇಕು ಎಂಬ ನಿಟ್ಟಿನಲ್ಲಿ ಸರಕಾರವು ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದೆ ಇದು ಬಹಳ ಅರ್ಥಪೂರ್ಣ ಕಾರ್ಯಕ್ರಮ ನಾವು ನಮ್ಮ ನಮ್ಮ ಮನೆಗಳಲ್ಲಿ ಪರಿಸರದಲ್ಲಿ ಗಿಡಗಳನ್ನು ನಾಟಿ ಮಾಡಿ ಅವುಗಳನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಇದರಿಂದ ನಮ್ಮ ಪರಿಸರ ಉಳಿಯುತ್ತದೆ ನಮ್ಮ ಮಕ್ಕಳು ಮನಸ್ಸು ಮಾಡಿದರೆ ಮರ ಗಿಡಗಳನ್ನು ಬೆಳೆಸಿ ಪರಿಸರದ ಉಷ್ಣತೆಯನ್ನು ಕಾಪಾಡುವಲ್ಲಿ ಪ್ರಯತ್ನ ಮಾಡಬಹುದು ಪೂಜ್ಯ ಹೆಗಡೆಯವರು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಪರಿಸರ ಕಾರ್ಯಕ್ರಮವನ್ನು ನಡೆಸಲು ಪ್ರೇರಣೆ ನೀಡುತ್ತಿದ್ದಾರೆ. ಈ ಗಿಡಗಳನ್ನು ಪೋಷಿಸುವ ಜವಾಬ್ದಾರಿ ನಮ್ಮೆಲ್ಲರದು ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನೀನಾ ಕುಮಾರ್, ಒಕ್ಕೂಟ ಅಧ್ಯಕ್ಷ ಚರಣ್ ಕುಮಾರ್, ಉಪಾಧ್ಯಕ್ಷ ಜಯಪ್ರಕಾಶ್,
ಕಾರ್ಯದರ್ಶಿ ಅಕ್ಷತಾ, ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿಗಳಾದ ಸುರೇಂದ್ರ, ಕೇಂದ್ರ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷ ಸೀತಾರಾಮ್, ಮಾದರಿ ಹಿರಿಯ ಪ್ರಾಥಮಿಕ ಶಾಲಾಮುಖ್ಯೋಪಾಧ್ಯಾಯ ಸೂರ್ಯನಾರಾಯಣ, ಶಾಲಾ ಶಿಕ್ಷಕ ವೃಂದ, ಬೆಳ್ತಂಗಡಿ ವಲಯದ ಮೇಲ್ವಿಚಾರಕರು, ಹರೀಶ್ ಗೌಡ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ, ಪೃಥ್ವಿ ಜುವೆಲ್ಲರ್ ಬೆಳ್ತಂಗಡಿ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನೀನಾ ಕುಮಾರ್ ಧನ್ಯವಾದವಿತ್ತರು.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಸುರ್ಯ ದಿ. ಪುರಂದರ ಪೂಜಾರಿ ಇವರ ಸ್ಮರಣಾರ್ಥ ಜನಸ್ನೇಹಿ ಕಪ್ : ತಾ| ಮಟ್ಟದ ಪುರುಷರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಸನ್ಮಾನ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
error: Content is protected !!