38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾ| ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕು ಕಾನೂನು ಸೆವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ, ಬೆಳ್ತಂಗಡಿ ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ ಜೂ.05ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಹಿರಿಯ ನ್ಯಾಯಾಧೀಶ, ತಾ.ಕಾ.ಸೇ.ಸಮಿತಿಗಳ ಅಧ್ಯಕ್ಷ ಶಶಿಧರ ಎಂ ಗೌಡ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.

ಬೆಳ್ತಂಗಡಿ ಪ್ರಾದೇಶಿಕ ವಲಯಾರಣ್ಯಾಧಿಕಾರಿ ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್. ಮಾತನಾಡಿ ಗಿಡಗಳನ್ನು ನೆಟ್ಟು ಬೆಳೆಸುವುದರಿಂದ ಶುದ್ಧ ಪರಿಸರದ ಮೂಲಕ ಶುದ್ಧ ಗಾಳಿಯಿಂದ ಉತ್ತಮ ಆರೋಗ್ಯಕ್ಕೆ ಪ್ರಯೋಜನ ವಾಗುತ್ತದೆ. ಈ ನ್ಯಾಯಾಲಯದ ಆವರಣದಲ್ಲಿ ಹಿಂದೆ ನ್ಯಾಯದಿಶರು, ವಕೀಲರು, ಸಿಬ್ಬಂದಿಗಳು ನೆಟ್ಟ ಗಿಡಗಳಿಂದ ಪರಿಸರ ಉತ್ತಮವಾಗಿದೆ. ಮುಂದಕ್ಕೂ ನೆಟ್ಟ ಗಿಡಗಳನ್ನು ಪೋಷಿಸಿ ರಕ್ಷಿಸ ಬೇಕು ಎಂದರು ವನ್ಯಜೀವಿ ವಲಯಾರಣ್ಯಾಧಿಕಾರಿ ಸ್ವಾತಿ ಮಾತನಾಡಿ ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಅಭಿವೃದ್ಧಿಯ ಜೊತೆಗೆ ಪರಿಸರ ಉಳಿಸುವ ಕೆಲಸ ಮಾಡಬೇಕು ಎಂದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಮಾತನಾಡಿ ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಹಿಂದಿನ ನ್ಯಾಯಧೀಶರು ಉತ್ತಮ ಗಿಡಗಳನ್ನು ಬೆಳೆಸಲು ಸಹಕಾರ ನೀಡಿ ಸುಂದರ ಪರಿಸರ ನಿರ್ಮಿಸಿದ್ದಾರೆ ಇದನ್ನು ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯ ಎಂದು ಹೇಳುತ್ತಾ ವಿಶ್ವ ಪರಿಸರ ದಿನಾಚರಣೆಯ ಬಗ್ಗೆ ಮಾತನಾಡಿ ಶುಭ ಹಾರೈಸಿದರು.

ವಕೀಲರ ಸಂಘದ ಕಾರ್ಯದರ್ಶಿ ನವೀನ್.ಬಿ.ಕೆ,. ಅಪಾರ ಸರಕಾರ ವಕೀಲ ಮನೋಹರ್ ಕುಮಾರ್ ಇಳಂತಿಲ, ಉಪವಲಯಾಣ್ಯಾಧಿಕಾರಿಗಳಾದ ರವೀಂದ್ರ ಕೆ, ರಾಘವೇಂದ್ರ, ಮಹೇಶ, ಬೀಟ್ ಅರಣ್ಯಾಧಿಕಾರಿ ಸತೀಶ್, ಸಿಬ್ಬಂಧಿಗಳು, ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು, ನ್ಯಾಯಾಲಯದ ಸಿಬ್ಬಂಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya
error: Content is protected !!