28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya
error: Content is protected !!