25.7 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಜೂ.12 ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಜರುಗಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು,ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ.

ಅರ್ಜಿದಾರರು ನಮೂನೆ 1 ಹಾಗೂ II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಮಂಗಳೂರು ಲೋಕಾಯುಕ್ತಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Related posts

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಅರಸಿನಮಕ್ಕಿ -ಶಿಶಿಲ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಕೊಕ್ಕಡ ಸರಕಾರಿ ಆಸ್ಪತ್ರೆಯ ಬಾವಿಯ ಸ್ವಚ್ಛತಾ ಕಾರ್ಯ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ: ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!