28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾದ ರೋಯಿ ಜೋಸೆಫ್ ಮಾತನಾಡಿ ಪರಿಸರ ನಾಶದಿಂದ ದೇಶದಲ್ಲಿ ಆಗುವ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪಾತ್ರದ ಬಗ್ಗೆ ತಿಳಿಸಿದರು.


ಶಾಲೆಯ ಶಿಕ್ಷಕ ಪವನ್ ಕುಮಾರ್ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆಗೆ ಸಂಬಂಧಪಟ್ಟ ಭಾಷಣ ಹಾಗೂ ಹಾಡುಗಳನ್ನು ಪ್ರಸ್ತುತಪಡಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶ್ರೀಮತಿ ಸುಜಾತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya
error: Content is protected !!