24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

ಉಜಿರೆ : ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಭೂಮಿಯಲ್ಲಿ ಜೀವಿಸಲು ಕಷ್ಟವಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಉಜಿರೆ ಇಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರತ್ನಮಾನಸ ವಿದ್ಯಾರ್ಥಿ ನಿಲಯದ ನಿಲಯಪಾಲಕ ಯತೀಶ್ ಕೆ ಬಳಂಜ ನುಡಿದರು.


ಈಗಿನ ಕಾಲದಲ್ಲಿ ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಿದೆ. ಪರಿಸರ ನಾಶದಿಂದಾಗಿ, ತಾಪಮಾನದ ಏರಿಕೆ ಮಾತ್ರವಲ್ಲ ಕಾಡಿನಲ್ಲಿನ ಪ್ರಾಣಿಗಳನ್ನು ನಾಡಿನಲ್ಲಿ ಕಾಣುತ್ತಿದ್ದೇವೆ ಹಾಗೂ ವಿವಿಧ ರೀತಿಯ ಆಶ್ರಯ ನೀಡುವ ಆರೋಗ್ಯಕರ ಹಣ್ಣಿನ ಮರಗಳ ಸಂಖ್ಯೆ ಈಗ ಕಡಿಮೆಯಾಗಿದೆ. ಪರಿಸರ ನಾಶಕ್ಕೆ ಮುಖ್ಯ ಕಾರಣ ಅನಕ್ಷರಸ್ಥರು ಅಲ್ಲ, ಅಕ್ಷರಸ್ಥರ ಅಹಂಕಾರ. ನಮಗೆ ಪುಸ್ತಕ ಮಾತ್ರ ಪ್ರಪಂಚವಲ್ಲ. ಪರಿಸರವನ್ನು ಓದಬೇಕು, ಅಭ್ಯಾಸ ಮಾಡಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಾಲ್ಡಾನ ಇವರು ಮಾತನಾಡುತ್ತಾ ವಿವಿಧ ಗಿಡಗಳನ್ನು ನೆಟ್ಟರೆ ಭೂಮಿಯನ್ನು ಸ್ವರ್ಗ ಮಾಡಬಹುದು ಎಂಬ ಮಾತಿನಂತೆ ಅತೀ ಹೆಚ್ಚು ಉಪಯೋಗಕ್ಕೆ ಬರುವ ಗಿಡಗಳನ್ನು ನೆಟ್ಟರೆ ಇರುವ ಒಂದೇ ಭೂಮಿಯನ್ನು ಸ್ವರ್ಗ ಮಾಡಬಹುದು. ನಮ್ಮಿಂದ ಗಿಡ-ಮರ ಬೆಳೆಯಬೇಕು. ಮರಗಳಿಗೂ ಮಾನವರಿಗೂ ಸಂಪರ್ಕವಿರಬೇಕು. ಆಗ ಮಾತ್ರ ಪರಿಸರವು ಮುಂದಿನ ಜನಾಂಗಕ್ಕೆ ಉಳಿಯುತ್ತದೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.


ನಂತರ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಅದ್ಭುತ ಅರ್ಥ ನೀಡುವ ಪರಿಸರ ಗೀತೆಯನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ, ವಿದ್ಯಾಶ್ರೀ ಪಿ, ಅನುಷಾ ಡಿ.ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ನ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಥಮ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳಾದ ವಿಶಾಲ ಸ್ವಾಗತಿಸಿ, ದಿವ್ಯ ಕೆ ಎಸ್ ವಂದಿಸಿ, ರಾಫಿಯಾ ಅತಿಥಿ ಪರಿಚಯಿಸಿ, ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!