24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಜೂ 5 ರಂದು “ವಿಶ್ವ ಪರಿಸರ ದಿನಾಚರಣೆ”ಯನ್ನು ಆಚರಿಸಲಾಯಿತು.

ಪರಿಸರದ ಕುರಿತಾದ ಕಾಳಜಿ ಮೂಡುವ ನಿಟ್ಟಿನಲ್ಲಿ ಚಿತ್ರಕಲಾ ಸ್ಪರ್ಧೆ, ಎಲೆ ಗುರುತಿಸುವ ಸ್ಪರ್ಧೆ, ರಸಪ್ರಶ್ನೆ ಏರ್ಪಡಿಸಲಾಗಿತ್ತು. ಹಾಗೂ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಕೃಷಿಯ ಪ್ರಾಮುಖ್ಯತೆಯ ಕುರಿತು ಶಾಲಾ ಶಿಕ್ಷಕರಾದ ಲಿಂಗಪ್ಪ ಗೌಡ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಿ ದಿನ ವಿಶೇಷತೆಯ ಕುರಿತು ಮಾಹಿತಿ ನೀಡಿದರು. ವಿಜ್ಞಾನ ಶಿಕ್ಷಕಿ ಶ್ರೀಮತಿ ತ್ರಿವೇಣಿ ಕಾರ್ಯಕ್ರಮವನ್ನು ಸಂಘಟಿಸಿದ್ದರು. ಶಾಲೆಯ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಉಜಿರೆಯಲ್ಲಿ ವಿಶೇಷ ಅಭಿಯಾನ – ಕೊಡೆ ನಾ ನಿನ್ನ ಬಿಡೆ

Suddi Udaya
error: Content is protected !!