28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು.

ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ. ಇಡಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಕೆ. ಎ. ಯವರು ಮಾತನಾಡುತ್ತಾ, ಪರಿಸರ ಸಂರಕ್ಷಣೆಯ ಪ್ರಜ್ಞೆ ನಮ್ಮಲ್ಲಿ ಮೂಡಬೇಕು. ಇಂದಿನ ಜಾಗತಿಕೀಕರಣದ ವಿದ್ಯಮಾನಗಳಿಂದ ಪರಿಸರವು ನಾಶವಾಗುತ್ತಿದೆ. ನಮ್ಮ ಅಳಿವು ಉಳಿವಿನಲ್ಲಿ ಪರಿಸರದ ಉಳಿವಿನಲ್ಲಿದೆಯೆಂದು ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಪರಿಸರದ ವಿಶೇಷತೆ ಬಗ್ಗೆ ವಿದ್ಯಾರ್ಥಿಗಳ ಪರವಾಗಿ ಕು. ಲಿಖಿತಾ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅನಂತರ ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ ಮತ್ತು ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕಿ ಶ್ರೀಮತಿ ಕೋಕಿಲಾರವರು ಉಪಸ್ಥಿತರಿದ್ದು. ವಿದ್ಯಾರ್ಥಿಗಳಾದ ವಂಶಿತ್ ಸ್ವಾಗತಿಸಿ ಸಮೀಕ್ಷಾ ವಂದಿಸಿದರು, ಇಂದುಮತಿ ನಿರೂಪಿಸಿದರು.

Related posts

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!