26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ನಮ್ಮ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯ ಎಂದು ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಹೇಳಿದರು.

ಅವರು ಜೂ.6ರಂದು ಶ್ರೀ ನಾರಾಯಣ ಗುರು ಸಂಕೀರ್ಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದ ಕರುಣಾಕರ ಗೌಡ ಎಂಬಾತ ಹೆಣ್ಣು ಮಕ್ಕಳಿಗೆ ನೀಡುತ್ತಿದ್ದ ಕಿರುಕುಳವನ್ನು ನಮ್ಮ ಸಮುದಾಯದ ಅಶ್ವಥ್ ಪ್ರಶ್ನಿಸಿದ ಕಾರಣಕ್ಕಾಗಿ ಈ ಹಲ್ಲೆ ನಡೆಸಲಾಗಿದೆ. ಈತ ಈ ಹಿಂದೆ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ಕೂಡ ನಡೆಸುತ್ತಿದ್ದ. ಸಣ್ಣಪುಟ್ಟ ಹಲ್ಲೆ, ದಾಂದಲೆ, ಗೂಂಡಾಗಿರಿ ನಡೆಸುತ್ತಿದ್ದ ಈತನ ಮೇಲೆ ಹಲವು ಕೇಸ್ ಗಳು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

ಮೊನ್ನೆಯ ಘಟನೆಯಲ್ಲಿ ಮಾರಣಾಂತಿಕ ಹಲ್ಲೆ ನಡೆದು ಅಶ್ವಥ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಚಾರ ತಿಳಿದುಕೊಂಡ ಕರುಣಾಕರ ಗೌಡ ತನ್ನ ತಾಯಿಯನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಮಾನಭಂಗಕ್ಕೆ ಯತ್ನ ನಡೆದಿದೆ ಎಂದು ನಮ್ಮ ಸಮುದಾಯದ ಅಶ್ವಥ್ ಮತ್ತು ಮೇಲೆ ಸುಳ್ಳು ಕೇಸ್ ದಾಖಲಿಸಿರುವುದು ಅತ್ಯಂತ ಕಟು ಶಬ್ದಗಳಿಂದ ಖಂಡಿಸುತ್ತೇವೆ.

ಆರೋಪಿ ಕರುಣಾಕರ ಗೌಡನ ಈ ಹಿಂದಿನ ಎಲ್ಲಾ ಕೇಸ್ ಗಳ ಆಧಾರದಲ್ಲಿ ಆತನನ್ನು ರೌಡಿಶೀಟರ್ ಪಟ್ಟಿಗೆ ಸೇರಿಸುವ ಮೂಲಕ ಆತನನ್ನು ಬೆಳ್ತಂಗಡಿ ತಾಲೂಕಿನಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಪ್ರತಿಕಾಗೋಷ್ಠಿಯಲ್ಲಿ ತಾಲೂಕು ಮರಾಠಿ ಸೇವಾ ಸಂಘದ ಸಂಚಾಲಕ ಪ್ರಶಾಂತ್, ಆದಿವಾಸಿ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಲಾಯಿಲ, ವಿಶ್ವನಾಥ ಮಾಚಾರು ಉಪಸ್ಥಿತರಿದ್ದರು.

Related posts

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya
error: Content is protected !!