32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!