30.8 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

ಕೊಕ್ಕಡ: ವಿದ್ಯಾರ್ಥಿ ದೆಸೆಯಲ್ಲಿ ಗಿಡ ಮರಗಳ ಮಹತ್ವವನ್ನು ಅರಿತು, ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಪ್ರಸ್ತುತ ಕಾಲ ಘಟ್ಟದಲ್ಲಿ ಅತಿ ಅವಶ್ಯಕವಾಗಿದ್ದು, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲದೆ ಪ್ರಕೃತಿಯೊಂದಿಗೆ ಬದುಕುವ ನೈಜ ಜೀವನ ಪದ್ಧತಿಯನ್ನು ತಿಳಿ ಹೇಳುವ ಕಾರ್ಯವು ನಡೆಯುತ್ತಿದೆ. ವಿದ್ಯಾರ್ಥಿಗಳ ಮೂಲಕ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಗಿಡವನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಲಾಗುತ್ತಿದೆ. ಶಾಲೆಯಲ್ಲಿ ಈಗಾಗಲೇ ಆಡಳಿತ ಸಮಿತಿ ಹಾಗೂ ಶಿಕ್ಷಕರು ಮಗುವಿಗೊಂದು ಮರ ಎನ್ನುವ ಯೋಜನೆಯನ್ನು ಹಾಕಿಕೊಂಡಿದೆ. ಈ ಯೋಜನೆಯಲ್ಲಿ ಪ್ರತಿ ಮಗುವು ಶಾಲೆಯಲ್ಲೊಂದು ಅಥವಾ ಮನೆಯಲ್ಲೊಂದು ಗಿಡ ನೆಟ್ಟು ಪೋಷಿಸುವ ಕಾರ್ಯ ಮಾಡಲಿದ್ದಾರೆ ಎಂದು ಶ್ರೀ ಕ್ಷೇತ್ರ ಸೌತಡ್ಕದ ನೈಮಿಷ ಹೌಸ್ ಆಫ್ ಸ್ಪೈಸಸ್ ನ ಮಾಲಕ ಬಾಲಕೃಷ್ಣ ನೈಮಿಷ ತಿಳಿಸಿದರು.


ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆವರಣದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.


ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಮಾತನಾಡಿ, ಗಿಡ ನೆಟ್ಟು ಪೋಷಿಸುವ ಕಾರ್ಯ ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗಿರದೆ, ನಿರಂತರ ನಾವು ಪ್ರಕೃತಿಯೊಂದಿಗೆ ಸಂಬಂಧವನ್ನು ಇರಿಸಿಕೊಳ್ಳುವಂತಿರಬೇಕು ಎಂದರು.
ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಾತನಾಡಿ, ಶಾಲೆಯಲ್ಲಿ ಕಳೆದ ವರ್ಷವೂ ಹಲವು ಔಷಧಿಯ ಗಿಡಗಳನ್ನು ನೆಟ್ಟು ಪೋಷಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಮುಂದುವರಿಸಿಕೊಂಡು ಹೋಗಲಿದ್ದೇವೆ ಎಂದರು.
ವಿದ್ಯಾರ್ಥಿಗಳ ಮನೆಯಿಂದ ತಂದಿರುವ ಗಿಡಗಳನ್ನು ಶಾಲಾ ತೋಟದಲ್ಲಿ ನೆಡಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ