32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 05 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಟ್ಟು ನೀರುಣಿಸುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ನಸೀರ್ ಅಹಮದ್ ಖಾನ್ ರವರು ಪರಿಸರ ರಕ್ಷಣೆ ಬಗ್ಗೆ ಮಾಹಿತಿ ನೀಡಿ ಪರಿಸರವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿ ಎಂದರು. ಪರಿಸರ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಚಿತ್ರ ಕಲೆ, ಎಲೆ ಗುರುತಿಸುವಿಕೆ, ಪ್ರಬಂಧ ಮುಂತಾದ ಚಟುವಟಿಕೆಗಳನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ -ರಕ್ಷಕ ಸಂಘದ ಸದಸ್ಯರಾದ ಧನಕೀರ್ತಿ ಜೈನ್ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಟೀಂ ಅಭಯಹಸ್ತ ಇದರ ಸಮಾಲೋಚನಾ ಸಭೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಲಬ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಂದಂತಹ ಗ್ರಾಹಕರಿಗೆ ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

Suddi Udaya
error: Content is protected !!