22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

ಬೆಳ್ತಂಗಡಿ: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಮೊದಲನೇ ಪ್ರಾಶಸ್ತ್ರದಲ್ಲೇ ಜಯಭೇರಿ ಗಳಿಸಿದ್ದಾರೆ.

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಹಾಗೂ ಹೊನ್ನಾಳಿ ತಾಲೂಕುಗಳನ್ನು ಒಳಗೊಂಡಂತಿರುವ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳನ್ನು ಒಳಗೊಂಡಿರುವಂತೆ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಶಿವಮೊಗ್ಗ ವಿನೋಭನಗರದ ಡಾ.ಧನಂಜಯ ಸರ್ಜಿಯವರು 19,973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಒಟ್ಟು 31199 ಮತಗಳಿಸಿದ ಡಾ. ಧನಂಜಯ ಸರ್ಜಿಯವರು 19973 ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು 11226 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. .

Related posts

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು ಪ್ರೌಢ ಶಾಲೆಯಲ್ಲಿಎಸ್ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಯ ಸಮಾರೋಪ ಸಮಾರಂಭ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಕಕ್ಕಿಂಜೆ ರಸ್ತೆಯ ಮಧ್ಯೆ ಕೆಟ್ಟು ನಿಂತ ಲಾರಿ: ಒಂದು ಗಂಟೆಗಿಂತ ಅಧಿಕ ಕಾಲ ಟ್ರಾಫಿಕ್ ಜಾಮ್

Suddi Udaya
error: Content is protected !!