September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂನ್ 8 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ನಡೆಯಿತು.


ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾ ಸಂಚಾಲಕರು ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2024-25 ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಬಹುದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ನೈನಾಡು ಚರ್ಚಿನ ಧರ್ಮಗುರುಗಳಾದ ವಂ|ಸ್ವಾ| ಅನಿಲ್ ಅವಿಲ್ಡ್ ಲೋಬೊ ಇವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ಮಕ್ಕಳು ತಮ್ಮ ಜೀವನದಲ್ಲಿ ಕೆಲವು ಸೂತ್ರಗಳನ್ನು ಅನುಸರಿಸಬೇಕು, ಇದರಿಂದ ನಿಮ್ಮ ಜೀವನವು ಪರಿಪೂರ್ಣವಾಗುತ್ತದೆ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸತತ ಹನ್ನೆರಡು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ತಮ್ಮೆಲ್ಲರನ್ನು ಆಕಸ್ಮಿಕವಾಗಿ ಅಗಲಿದ ಶಿಕ್ಷಕಿ ಸುಜಾತ ರವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.


2023-24ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕವನ್ನು ಗಳಿಸಿದ ಅಲ್ವಿಟಾ ಡಿಸೋಜ, ನಂದನ್ ಪಿ ನಾಯಕ್ , ಗೌತಮಿ, ಜೊಸ್ಲಿನ್ ರಶ್ಮಿ ಡಿಸೋಜ, ಸ್ಪಂದನ ನಾಯಕ್, ರಿಶಾ ಕೊರೆಯ ಹಾಗೂ ಪ್ರಿಯಾ ಶಾಂತಿ ಫೆರ್ನಾಂಡಿಸ್ ಇವರನ್ನು ಅವರ ಹೆತ್ತವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.


ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕ- ಶಿಕ್ಷಕಿಯರನ್ನು ಮತ್ತು ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೊ ಡೇಸ ಇವರು ವಿದ್ಯಾರ್ಥಿಗಳಿಗೆ ಶಾಲಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಸ್ ರವರು,ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ ರವರು,ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕಿಯರಾದ ಶ್ರೀಮತಿ ವಿನ್ನಿ ಲೋಬೊ ರವರು ನಿರೂಪಿಸಿ, ಶ್ರೀಮತಿ ಜ್ಯೋತಿ ಫೆರ್ನಾಂಡಿಸ್ ರವರು ಸ್ವಾಗತಿಸಿ, ಶ್ರೀಮತಿ ಪ್ರಿನ್ಸಿಯಾ ಮಸ್ಕರೇನಸ್ ರವರು ಧನ್ಯವಾದಗಳನ್ನು ಸಮರ್ಪಿಸಿದರು .

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯ ವತಿಯಿಂದ ಶಿರ್ಲಾಲು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya
error: Content is protected !!