37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

ನಾರಾವಿ: “ಪದವಿಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತುಂಬಾ ಮುಖ್ಯವಾದ ಹಂತ. ಶಿಕ್ಷಣದೊಂದಿಗೆ ಜೀವನ ಶಿಕ್ಷಣ ಹಾಗೂ ಜೀವನ ಮೌಲ್ಯಗಳನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತಿದೆ. ನೈತಿಕತೆ ಮತ್ತು ಸಂಸ್ಕಾರ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ನೀಡುತ್ತದೆ”. ಎಂದು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಡಾ. ಆಲ್ವಿನ್ ಸೆರಾವೋ ಹೇಳಿದರು.

ಅವರು ನಾರಾವಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆದ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತಾಡಿದರು.


ಕನ್ನಡ ಉಪನ್ಯಾಸಕರಾದ ದಿನೇಶ್ ಬಿ ಕೆ ಬಳಂಜ ಮಾತನಾಡಿ ಶುಭಹಾರೈಸಿದರು. ವೇದಿಕೆಯಲ್ಲಿ ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ಗಣಿತಶಾಸ್ತ್ರದ ಉಪನ್ಯಾಸಕರಾದ ಸಂತೋಷ್ ಸಲ್ಡಾನ ಸ್ವಾಗತಿಸಿದರು. ಇತಿಹಾಸ ಉಪನ್ಯಾಸಕರು ಮತ್ತು ಉಪಪ್ರಾಂಶುಪಾಲರಾದ ರಿಚರ್ಡ್ ಮೋರಸ್ ಧನ್ಯವಾದವಿತ್ತರು. ಹಾಗೇ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು.ಅಶ್ವಿತಾ ಸೆರಾವೋ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya
error: Content is protected !!