ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಉಜಿರೆ: ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ನಾಯಕರ ಮೇಲೆ ಯಾವ ರೀತಿ ದೌರ್ಜನ್ಯಗಳನ್ನು ನಡೆಸಲಾಗುತ್ತಿದೆ ಎಂಬುದಕ್ಕೆ ಮೇಲಿಂದ ಮೇಲೆ ಉದಾಹರಣೆಗಳು ಸಿಗುತ್ತಿದೆ. ಇತ್ತೀಚೆಗಷ್ಟೇ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರ ಮೇಲೆ ದ್ವೇಷದಿಂದ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಮೇಲೆ ದ್ವೇಷ ಕಾರುತ್ತಿರುವುದು ಸ್ಪಷ್ಟವಾಗುತ್ತಿದೆ. ಇದಕ್ಕೆ ಉದಾಹರಣೆಯಾಗಿ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮರ್ ಹತ್ಯೆಯನ್ನು ಖಂಡಿಸಿ ಉಜಿರೆಯಲ್ಲಿ ಎಬಿವಿಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಅನ್ಯಾಯದ ವಿರುದ್ಧ ಘೋಷಣೆ ಕೂಗಿದ್ದ ಪ್ರತಿಭಟನೆಕಾರರು ನ್ಯಾಯಕ್ಕಾಗಿ ಆಗ್ರಹಿಸಿದ್ದರು.ಆದರೆ ವಿದ್ಯಾರ್ಥಿಗಳು ಒಂದು ಕಡೆ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದರೆ, ಪೊಲೀಸರು ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಎಫ್ ಐ ಆರ್ ದಾಖಲಿಸಿದ್ದಾರೆ. ಏಪ್ರಿಲ್ 22ರಂದು ನಡೆದ ಈ ಪ್ರತಿಭಟನೆಯಲ್ಲಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಗುಂಪು ಸೇರಲಾಗಿದೆ. ಜೊತೆಗೆ ಅನುಮತಿಯನ್ನು ಪಡೆದಿಲ್ಲ ಎಂದು ವಿದ್ಯಾರ್ಥಿ ನಾಯಕರಾದ ಸುವಿತ್ ಶೆಟ್ಟಿ, ಸುಮಂತ್ ನೆರಿಯ, ಸನಲ್ ಶೆಟ್ಟಿ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಇದ್ದರೂ ಕೂಡ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದರು. ಸಾಕಷ್ಟು ಸಂದರ್ಭದಲ್ಲಿ ಚುನಾವಣಾ ನೀತಿ ಸಮಿತಿ ಉಲ್ಲಂಘನೆಯಾಗಿದ್ದರೂ, ಯಾವುದೇ ಕ್ರಮಗಳನ್ನು ವಹಿಸಿರಲಿಲ್ಲ.ಆದರೆ ಬಿಜೆಪಿ ಹಾಗೂ ಕಾರ್ಯಕರ್ತರ ವಿರುದ್ಧ ಸದಾ ದ್ವೇಷ ಕಾರುವ ಕಾಂಗ್ರೆಸ್ ನಡವಳಿಕೆ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Leave a Comment

error: Content is protected !!