September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

ಬೆಳಾಲು: ಕೇಂದ್ರ ಸರಕಾರದ ಅನುದಾನದಿಂದ ನಡೆಸಲ್ಪಡುವ ಮತ್ತು ತೋಟಗಾರಿಕೆ ಹಾಗೂ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟ ರೈತ ಉತ್ಪದಕರ ಕಂಪನಿಯ ವತಿಯಿಂದ, ಗ್ರಾಮ ಪಂಚಾಯತ್ ಬೆಳಾಲು ನಾಗ೦ಬಿಕ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಭಾಗಿತ್ವದಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ ಜೂ.7ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.

ಗ್ರಾಮ ಪಂಚಾಯತ್ ನ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷೆ ಮಧುರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಜಿರೆ ರೈತ ಉತ್ಪಾದಕರ ಸಂಘದ ನಿರ್ದೇಶಕ ಜಯಂತ್, ಕಾರ್ಯನಿರ್ವಹಣಾಧಿಕಾರಿ ದಿನೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿರ್ದೇಶಕರು ಮಾತನಾಡಿ ನೋಂದಾಯಿತ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಪರಿಕರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು. ಎರಡು ಗ್ರಾಮದ ಕೃಷಿ ಸಖಿಯರು ಭಾಗವಹಿಸಿದರು. 46 ರೈತರ ಸದಸ್ಯತ್ವ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಂ.ಬಿ.ಕೆ, ಪಶು ಸಖಿ, ಕೃಷಿ ಸಖಿ ಮತ್ತು ಗ್ರಾಮದ ರೈತರು ಭಾಗವಹಿಸಿದ್ದರು.

Related posts

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya
error: Content is protected !!