ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನೂರು ಶೇಕಡ ಸಾಧನೆಗೆ ಕಾರಣವಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ವೈಯಕ್ತಿಕ ನೆಲೆಯಲ್ಲಿ ಪ್ರತೀ ವಿದ್ಯಾರ್ಥಿಗಳಿಗೆ ಸ್ಮರಣಿಕೆಯೊಂದಿಗೆ ರೂ. ಒಂದು ಸಾವಿರದ ಪ್ರೋತ್ಸಾಹ ಧನವನ್ನು ನೀಡಿ ಸನ್ಮಾನಿಸಿದರು.
ಜೊತೆಗೆ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದಲೂ ಪ್ರತೀ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ವಿತರಿಸಿ ಮಾತನಾಡುತ್ತಾ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶದ ಸಾಧನೆಯನ್ನು ಮಾಡಿ ಊರಿಗೆ ಕೀರ್ತಿ ತಂದಿದ್ದಾರೆ. ತಮ್ಮ ಮುಂದಿನ ವಿದ್ಯಾಭ್ಯಾಸದಲ್ಲಿ ಉನ್ನತ ಗುರಿಯೊಂದಿಗೆ ಅಧ್ಯಯನದ ಮಾಡುವ ಮೂಲಕ ಉತ್ತಮ ಸ್ಥಾನಮಾನವನ್ನು ಹೊಂದಿರಿ ಎನ್ನುತ್ತಾ ಶುಭಹಾರೈಸಿದರು.
ಅತಿಥಿಗಳಾದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಕನಿಕ್ಕಿಲ, ಶಾಲೆಯ ಹಳೆ ವಿದ್ಯಾರ್ಥಿ ಇಂಜಿನಿಯರಿಂಗ್ ಪದವೀಧರೆ ಕು. ವಂದನಾ ಪರಂಗಜೆ ಅನಿಸಿಕೆಗಳೊಂದಿಗೆ ಶುಭಕೋರಿದರು. ವೇದಿಕೆಯಲ್ಲಿ ಪಂಚಾಯತಿನ ವಾಚನಾಲಯಅಧಿಕಾರಿ ಡೀಕಯ್ಯ ಗೌಡ ಅರಣೆಮಾರು, ಶಿಕ್ಷಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.