April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

ಬೆಳಾಲು : ಆಯುಷ್ ಮಂತ್ರಾಲಯ ಭಾರತ ಸರಕಾರ ನವದೆಹಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇವರ ಸಹಯೋಗದೊಂದಿಗೆ 10ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 09 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಉಚಿತ ಯೋಗ ಶಿಬಿರ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷರು ಗ್ರಾಮ ಪಂಚಾಯತ್ ಬೆಳಾಲು ಇವರು ನೆರವೇರಿಸಿದರು .

ಮುಖ್ಯ ಅತಿಥಿಗಳಾಗಿ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಗೌಡ ವಕೀಲರು ಶ್ರೀಸೌಧ ಬೆಳಾಲು ಹಾಗೂ ಬೆಳಾಲು ಗ್ರಾಮ ಪಂಚಾಯಿತಿನ ಸದಸ್ಯರಾದ ಸತೀಶ್ ಎಳ್ಳುಗದ್ದೆ ಇವರು ಭಾಗವಹಿಸಿದರು.

ವಿದ್ಯಾರ್ಥಿ ಯೋಗ ತರಬೇತಿದಾರರಾದ ವಿಖ್ಯಾತ್ ಎಂ.ಜಿ ಮಣಿಕಳ, ಅಭಿಜ್ಞಾ ಉರೆಜ್ಜ ಭಾಗವಹಿಸಿದರು ಕಾರ್ಯಕ್ರಮವನ್ನು ಮೋಹನ್ ಗೌಡ ಉರೆಜ್ಜ ಪ್ರಭಾರ ಪ್ರಾಂಶುಪಾಲರು ಪಿಯು ಕಾಲೇಜ್ ಕೊಯ್ಯೂರು ನಿರೂಪಿಸಿ,ಗ್ರೀಷ್ಮ ಉರೆಜ್ಜ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಿದ್ದರು

Related posts

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಾಂಗ್ರೆಸ್ ನ ಸಕ್ರೀಯ ಕಾರ್ಯಕರ್ತೆ ಸಾವಿತ್ರಿ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya
error: Content is protected !!