April 2, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಬೆಳಾಲು ಶ್ರೀಧ.ಮ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ನೂರು ಶೇಕಡ ಸಾಧನೆಗೆ ಕಾರಣವಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಮಾರಂಭ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ವೈಯಕ್ತಿಕ ನೆಲೆಯಲ್ಲಿ ಪ್ರತೀ ವಿದ್ಯಾರ್ಥಿಗಳಿಗೆ ಸ್ಮರಣಿಕೆಯೊಂದಿಗೆ ರೂ. ಒಂದು ಸಾವಿರದ ಪ್ರೋತ್ಸಾಹ ಧನವನ್ನು ನೀಡಿ ಸನ್ಮಾನಿಸಿದರು.

ಜೊತೆಗೆ ಶಿಕ್ಷಕ ರಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ವತಿಯಿಂದಲೂ ಪ್ರತೀ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ವಿತರಿಸಿ ಮಾತನಾಡುತ್ತಾ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಲ್ಲಿ ನೂರು ಶೇಕಡ ಫಲಿತಾಂಶದ ಸಾಧನೆಯನ್ನು ಮಾಡಿ ಊರಿಗೆ ಕೀರ್ತಿ ತಂದಿದ್ದಾರೆ. ತಮ್ಮ ಮುಂದಿನ ವಿದ್ಯಾಭ್ಯಾಸದಲ್ಲಿ ಉನ್ನತ ಗುರಿಯೊಂದಿಗೆ ಅಧ್ಯಯನದ ಮಾಡುವ ಮೂಲಕ ಉತ್ತಮ ಸ್ಥಾನಮಾನವನ್ನು ಹೊಂದಿರಿ ಎನ್ನುತ್ತಾ ಶುಭಹಾರೈಸಿದರು.

ಅತಿಥಿಗಳಾದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶೇಖರ ಗೌಡ ಕೊಲ್ಲಿಮಾರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ಕನಿಕ್ಕಿಲ, ಶಾಲೆಯ ಹಳೆ ವಿದ್ಯಾರ್ಥಿ ಇಂಜಿನಿಯರಿಂಗ್‌ ಪದವೀಧರೆ ಕು. ವಂದನಾ ಪರಂಗಜೆ ಅನಿಸಿಕೆಗಳೊಂದಿಗೆ ಶುಭಕೋರಿದರು. ವೇದಿಕೆಯಲ್ಲಿ ಪಂಚಾಯತಿನ ವಾಚನಾಲಯಅಧಿಕಾರಿ ಡೀಕಯ್ಯ ಗೌಡ ಅರಣೆಮಾರು, ಶಿಕ್ಷಕರು,ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya
error: Content is protected !!