32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

ಬೆಳ್ತಂಗಡಿ: ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮುಂಬಯಿಯ ಸಾನ್ನಾಡಾದಲ್ಲಿ ಬಿಲ್ಲವ ಸಮುದಾಯ ಭವನ- ಗುರುಮಂದಿರದ ಉದ್ಘಾಟಿಸಿ ನಂತರ ನವಿ ಮುಂಬಯಿ ಸ್ಥಳೀಯ ಕಚೇರಿಯ ರಜತ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ನವಿ ಮುಂಬಯಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ವಿ.ಕೆ.ಪೂಜಾರಿ, ಗೌರವ ಕಾರ್ಯಾಧ್ಯಕ್ಷ ರಮೇಶ್ ಪೂಜಾರಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಹೇರಂಬಾ ಇಂಡಸ್ಟ್ರೀಸ್ ಸಿಎಂಡಿ ಕನ್ಯಾನ ಸದಾಶಿವ ಕೆ. ಶೆಟ್ಟಿ, ಅಖಿಲ ಭಾರತ ಬಿಲ್ಲವ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖ‌ರ್ ಕೋಟ್ಯಾನ್, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ ಎಲ್.ವಿ. ಅಮೀನ್, ಬಿಲ್ಲವ ಚೇಂಬ‌ರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಕಾರ್ಯಾಧ್ಯಕ್ಷ ಎನ್.ಟಿ. ಪೂಜಾರಿ, ಭಾರತ್ ಬ್ಯಾಂಕ್ ಸಂಸ್ಥಾಪಕಾಧ್ಯಕ್ಷ ಭರತ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕಿ ಶಾರದಾ ಸೂರು ಕರ್ಕೇರಾ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕುದ್ರೋಳಿ ಕ್ಷೇತ್ರದ ಟ್ರಸ್ಟಿ ಶೇಖರ್ ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಗೆಜ್ಜೆಗಿರಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವಿ ಚಿಲಿಂಬಿ, ಧರ್ಮಪಾಲ ದೇವಾಡಿಗ, ಶ್ರೀನಿವಾಸ ಸಪಲ್ಯ, ಚಂದ್ರಶೇಖರ ಬೆಳ್ತಂಗಡಿ, ರವಿ ಎಲ್. ಬಂಗೇರ, ಗಂಗಾಧರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸಾವ್ಯ: ಮರದಿಂದ ಬಿದ್ದ ವ್ಯಕ್ತಿ; ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!