29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕರಾವಳಿ ಜಾನಪದ ಕಲಾ ತಂಡದಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಒಕ್ಕೂಟ ಅಧ್ಯಕ್ಷರಾದ ಮಹೇಶ್ ರವರು ದೀಪ ಬೆಳಗಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕರಾವಳಿ ಜಾನಪದ ಕಲಾ ತಂಡದವರಿಂದ ನೀರು ಮತ್ತು ನೈರ್ಮಲ್ಯದ ಬಗ್ಗೆ ನೀರು ಅತ್ಯಅಮೂಲ್ಯ, ನೀರು ಇಲ್ಲದೆ ಮನುಷ್ಯ ಬದುಕಲು ಸಾಧ್ಯವಿಲ್ಲ, ಕುಡಿಯುವ ನೀರಿನ ಮಹತ್ವ ಮತ್ತು ಸದ್ಬಳಕೆ ಅಗತ್ಯ, ಪ್ರತಿಯೊಬ್ಬರೂ ನೆಲ -ಜಲ, ಅಂತರ್ಜಲ ಹೆಚ್ಚಳ ಮತ್ತು ಮಳೆನೀರು ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಉಳಿಕೆ, ಮತ್ತು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಭೂಮಿಯಲ್ಲಿ ಅಂತರ್ಜಲ ಕ್ಷೀಣಿಸಿದಂತೆ ದಿನೇ ದಿನೇ ನೀರಿನ ಸಮಸ್ಯೆ ಉಂಟಾಗಿ ಪರಿಸರದಲ್ಲಿ ಅಸಮತೋಲನ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ದಿಸೆಯಲ್ಲಿ ನೀರಿನ ಸಮಸ್ಯೆಯನ್ನು ಮನಗಂಡು ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡಲು ಜನರಲ್ಲಿ ಪ್ರಜ್ಞೆ ಮೂಡಬೇಕಾಗಿದೆ ಎಂದು ಬೀದಿನಾಟಕ ಪ್ರದರ್ಶನ ಮೂಲಕ ಜನರಿಗೆ ಅರಿವು ಮೂಡಿಸಿದರು. ವಲಯದ ಮೇಲ್ಪೀಚಾರಕರಾದ ಸುಶಾಂತ್ ಹಾಗೂ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಸೇವಾಪ್ರತಿನಿಧಿ ರತ್ನಾವತಿ ಕಲಾತಂಡದವರು ಹಾಗೂ ಕೇಂದ್ರದ ಎಲ್ಲಾ ಸದಸ್ಯರು.ಊರಿನ ಸದಸ್ಯರು ಸ್ವಸಹಾಯ ತಂಡದ ಸದಸ್ಯರು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬಂದಾರು, ಮೊಗ್ರು ಗ್ರಾಮಗಳಲ್ಲಿ ತೀವ್ರ ನೆಟ್‌ವರ್ಕ್ ಸಮಸ್ಯೆ: ಗ್ರಾಹಕರ ಆಕ್ರೋಶ ಉದ್ಯೋಗಿಗಳು, ವಿದ್ಯಾರ್ಥಿಗಳ ಪರದಾಟ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!