24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಳದ ಆವರಣದಲ್ಲಿ ಅರಣ್ಯ ಇಲಾಖೆ, ಹತ್ಯಡ್ಕ ಎ ಮತ್ತು ಬಿ ಒಕ್ಕೂಟ, ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ದೇವಾಲಯದ ಭಕ್ತರು ಸೇರಿ ವಿಶ್ವ ಪರಿಸರ ದಿನವನ್ನು ಗಿಡ ನೆಡುವ ಮೂಲಕ ಜೂ.11 ರಂದು ಆಚರಿಸಿದರು.

ಈ ಸಂದರ್ಭದಲ್ಲಿ ದೇವಳದ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಪಿಲಿಕ್ಕಬೆ, ಟ್ರಸ್ಟ್ ನ ಕಾರ್ಯದರ್ಶಿ ಮುರಳಿಧರ್ ಶೆಟ್ಟಿಗಾ‌ರ್, ಸದಸ್ಯರಾದ ರೋಹಿತಾಶ್ವ ಶೆಟ್ಟಿಗಾರ್, ಗಣೇಶ್, ವಸಂತ್, ದೇವಕಿ, ಮಮತಾ, ಉಪ್ಪಿನಂಗಡಿ ಅರಣ್ಯ ವಿಭಾಗದ ಉಪವಲಯ ಅರಣ್ಯಧಿಕಾರಿ ಯತೀಂದ್ರ, ಗಾರ್ಡ್ ನಿಂಗಪ್ಪ ಅವಾರಿ, ಸಿದ್ದಿವಿನಾಯಕ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿಗಳಾದ ಯಮುನಾ, ರೂಪ, ಒಕ್ಕೂಟದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ವಿಠಲ್ ಅಡಪಾ, ಸುನಂದಾ ಟಿ ಮತ್ತು ಶೌರ್ಯ ವಿಪತ್ತು ತಂಡದಿಂದ ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸೋಮಶೇಖ‌ರ್ ಗೌಡ, ಕಿರಣ್, ರಮೇಶ್, ಸ್ನೇಕ್ ಸುರೇಶ್, ಹರೀಶ್ ವಳಗುಡ್ಡೆ ಉಪಸ್ಥಿತರಿದ್ದು ವನಮಹೋತ್ಸವ ಕಾರ್ಯಕ್ರಮ ನಡೆಸಿಕೊಟ್ಟರು.

ಮುರುಳೀಧರ ಶೆಟ್ಟಿಗಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.

Related posts

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಬೆಳ್ತಂಗಡಿ: ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ: ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!