April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

ಬoದಾರು : ರಾಷ್ಟಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರ್ಥಿನಿಯರ ತಂಡ 9 ವರ್ಷಗಳಿಂದ ಸಾಧನೆ ಮಾಡಿರುವ ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಬಂದಾರು ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಸದಸ್ಯರುಗಳಿಂದ ಶ್ರಮದಾನ ಕೈಗೊಳ್ಳಲಾಯಿತು.

ಶಾಲಾ ಮೈದಾನವನ್ನು ಸ್ವಚ್ಛಗೊಳಿಸಿ ಮತ್ತು ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಯಿತು. ಶಾಲೆಯ ಸುತ್ತಮುತ್ತಲಿನ ಹುಲ್ಲು, ಗಿಡ ಗಂಟಿಗಳನ್ನು ತೆಗೆದುಹಾಕಿ ಮಕ್ಕಳಿಗೆ ಆಟವಾಡಲು ವಾಲಿಬಾಲ್ ಅಂಕಣ ಮತ್ತು ಖೋಖೋ ಅಂಕಣವನ್ನು ಸಜ್ಜುಗೊಳಿಸಲಾಯಿತು. ಸೋರುತ್ತಿರುವ ಛಾವಣಿಯ ಹಂಚುಗಳನ್ನು ಸರಿಪಡಿಸಿ, ಮಧ್ಯಾಹ್ನ ಬಿಸಿ ಊಟಕ್ಕಾಗಿ ತರಕಾರಿ ತೋಟವನ್ನು ನಿರ್ಮಿಸಲಾಯಿತು. ಅಡಿಕೆ ತೋಟವನ್ನು ಸ್ವಚ್ಛಗೊಳಿಸಿ, ಸತ್ತುಹೋಗಿರುವ ಅಡಿಕೆ ಗಿಡಗಳ ಬದಲಿಗೆ ಹೊಸ ಸಸಿಗಳನ್ನು ನೆಡಲಾಯಿತು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಟಿ.ವಿ. ದೇವಸ್ಯ, ಉಪಾಧ್ಯಕ್ಷರಾಗಿ ಸುನಿಲ್ ದೊಂಡೋಲೆ ಅವಿರೋಧ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!