25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

ಉಜಿರೆ: ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ವ್ಯಕ್ತಿತ್ವ ನಿರ್ಮಾಣ ಜೊತೆಗೆ ಸವಾಲುಗಳನ್ನು ಎದುರಿಸುವ ಚಾಕಚಕ್ಯತೆ ಬೆಳೆಸಿಕೊಂಡು ಕ್ರಿಯಾಶೀಲತೆಯಿಂದ ಮುನ್ನಡೆದರೆ ಅವಕಾಶಗಳು ನಮ್ಮನ್ನು ಅರಸಿ ಬರುವುದು, ಹಾಗಾಗಿ ಕಲಿಕೆಯ ಜೊತೆಗೆ ನಮ್ಮ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವಿಷಯಗಳ ಜ್ಞಾನ ಹಾಗೂ ತರಬೇತಿ ಪಡೆದುಕೊಳ್ಳಬೇಕು.


ಪದವಿಪೂರ್ವ ಹಂತದಲ್ಲಿ ನಮ್ಮ ಭವಿಷ್ಯದ ನಿರ್ಧಾರಗಳು ಬಹುತೇಕ ಖಚಿತಗೊಂಡರೆ ಗುರಿಯತ್ತ ಸಾಗಲು ಅದು ಪ್ರೇರೇಪಿಸುವುದು ಎಂದರು.


ಶ್ರೀ. ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ಹೊಸದಾಗಿ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆಟ, ಉದಾಹರಣೆಗಳ ಮೂಲಕ ‘ವ್ಯಕ್ತಿತ್ವ ವಿಕಸನ ‘ ಕಾರ್ಯಾಗಾರವನ್ನು ಎಸ್.ಡಿ.ಎಂ ಪದವಿ ಕಾಲೇಜಿನ ಮನಶಾಸ್ತ್ರದ ಪ್ರಾಧ್ಯಾಪಕರಾದ ಸುಧೀರ್ ಕೆ.ವಿ ನಡೆಸಿಕೊಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ರಸಾಯನಶಾಸ್ತ್ರದ ಉಪನ್ಯಾಸಕಿ ಚೈತ್ರ ಕೆ.ಎಸ್. ಉಪಸ್ಥಿತರಿದ್ದರು.
ಗಣಕಶಾಸ್ತ್ರ ಉಪನ್ಯಾಸಕರಾದ ಕೃಷ್ಣಪ್ರಸಾದ್ ವಂದಿಸಿ, ನಿರೂಪಿಸಿದರು.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!