37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ. 16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಅಮ್ಮನವರ ನಿರ್ದೇಶನದಂತೆ ಜೂ.16 ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ.


ಉಚಿತ ಹಿಯರಿಂಗ್ ಟೆಸ್ಟ್ (ಉಚಿತ ಶ್ರವಣ ಪರೀಕ್ಷೆ), ಮಕ್ಕಳು ಮತ್ತು ವಯಸ್ಕರಲ್ಲಿ ಮೂಗಿನ ದ್ರವದ ತಪಾಸಣೆ, ಅಲರ್ಜಿಗೆ ಚಿಕಿತ್ಸೆ, ಮೈಗ್ರೇನ್ ತಲೆನೋವಿಗೆ ಚಿಕಿತ್ಸೆ, ವೆರ್‍ಟಿಗೋ ಪರೀಕ್ಷೆ ಮತ್ತು ಚಿಕಿತ್ಸೆ, ಧ್ವನಿ ಬದಲಾವಣೆಗಳ ಪರೀಕ್ಷೆ ಮತ್ತು ಚಿಕಿತ್ಸೆ, ಕಿವುಡುತನದ ಪರೀಕ್ಷೆ ಮತ್ತು ಚಿಕಿತ್ಸೆ, ಥೈರಾಯಿಡ್ ಪರೀಕ್ಷೆ ಮತ್ತು ಚಿಕಿತ್ಸೆ, ಕಿವಿ-ಮೂಗು- ಗಂಟಲು ಕ್ಯಾನ್ಸರ್ ತಪಾಸಣೆ, ಗೊರಕೆಗೆ ಚಿಕಿತ್ಸೆ ಇತ್ಯಾದಿ ಸೌಲಭ್ಯಗಳು ಈ ಶಿಬಿರದಲ್ಲಿ ದೊರೆಯಲಿದೆ.

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಕಿವಿ, ಮೂಗು, ಗಂಟಲು ತಜ್ಞರಾದ ಡಾ| ರೋಹನ್ ಎಂ. ದೀಕ್ಷಿತ್ MBBS, MS (ENT & HNS) Fellowship in Head & Neck Oncologist ಇವರು ರೋಗ ತಪಾಸಣೆ ನಡೆಸಲಿದ್ದಾರೆ. ಡಾ| ರೋಹನ್ ಎಂ. ದೀಕ್ಷಿತ್ ತಲೆ ಮತ್ತು ಕುತ್ತಿಗೆಯ ಕ್ಯಾನ್ಸರ್ ತಜ್ಞರಾಗಿದ್ದಾರೆ. ಇವರು ಪ್ರತಿದಿನ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಲಭ್ಯವಿರುತ್ತಾರೆ.

ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿರುತ್ತದೆ. ಒಳರೋಗಿ ವಿಭಾಗದಲ್ಲಿ 10%, ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ದೊರೆಯಲಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಸಂತ ಫ್ರಾನ್ಸಿಸ್ ಸಾವೆರ ವಾಳೆಯ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ತೆಕ್ಕಾರು ಕುಟ್ಟಿಕಳ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!