32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!