September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ವಿವಿಧ ವಿಭಾಗಗಳ ಪರಿಶೀಲನೆ

ಬೆಳ್ತಂಗಡಿ : ಬೆಳ್ತಂಗಡಿ ಪದವಿಪೂರ್ವ ಕಾಲೇಜು ಬಳಿ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಟ್ಟ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಸತಿನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜೂ12) ಭೇಟಿ ನೀಡಿ ವಸತಿ ನಿಲಯದ ವಿವಿಧ ವಿಭಾಗಗಳನ್ನು ಪರಿಶೀಲನೆ ನಡೆಸಿ, ಮಕ್ಕಳಿಗೆ ಮೂಲ ಭೂತ ಸೌಕರ್ಯಗಳನ್ನು ಒದಗಿಸಲಾಗಿದೆಯೇ ಎಂದು ವಿಚಾರಣೆ ನಡೆಸಿ, ಸೂಕ್ತ ಮಾರ್ಗದರ್ಶನ ನೀಡಿದರು.


ಕುಡಿಯುವ ನೀರು, ಅಡುಗೆಕೋಣೆ, ವಿಶ್ರಾಂತಿ ಕೊಠಡಿ, ಶೌಚಾಲಯ ವ್ಯವಸ್ಥೆಗಳ ಪರಿಶಿಲನೆ ಮಾಡಿದ ಅಧಿಕಾರಿಗಳು ವಸತಿನಿಲಯದ ಮೆಲ್ವಿಚಾರಕರಿಂದ ಮಾಹಿತಿ ಪಡೆದರು. ಅಡುಗೆ ಕೋಣೆ ಪರಿಶೀಲಿಸಿದ ಅಧಿಕಾರಿಗಳು ಆಹಾರ ದಾಸ್ತಾನು ಡಬ್ವಗಳ ಪರಿಶೀಲನೆ ಮಾಡಿದರು. ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರು ಕೊಡಬೇಕು, ಸಣ್ಣ ಪುಟ್ಟ ಅನಾರೋಗ್ಯ ಕಂಡು ಬಂದರೆ ತಕ್ಷಣ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೊಗುವಂತೆ ಸೂಚಿಸಿದರು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದರೆ ಲೋಕಾಯುಕ್ತ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳಲ್ಲಿ ಮಾಹಿತಿ ಸಂಗ್ರಹಿಸಿದ ಅಧಿಕಾರಿಗಳು ಆಹಾರ ವ್ಯವಸ್ಥೆ, ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು, ವಸತಿ ನಿಲಯದಲ್ಲಿ ಸಮಸ್ಯೆ ಬಂದರೆ ಲೋಕಾಯುಕ್ತಕ್ಕೆ ದೂರು ನೀಡಲು ತಿಳಿಸಿದರು. ವಸತಿನಿಲಯದ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಮಾಹಿತಿ ನೀಡಿದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಧಿಕಾರಿಗಳು ಸ್ಥಳೀಯ ಸಂಘ ಸಂಸ್ಥೆಗಳ ಸಂಪರ್ಕ ಪಡೆದು ಇಂತಹ ವಿದ್ಯಾರ್ಥಿಗಳಿಗೆ, ವಸತಿನಿಲಯದ ಸಿಬ್ಬಂದಿಗಳನ್ನು ಗುರುತಿಸಬೇಕು ಎಂದು ಸೂಚಿಸಿದರು.


ಲೋಕಾಯುಕ್ತ ಎಸ್ ಪಿ ನಟರಾಜ್ ಮಾರ್ಗದರ್ಶನದಲ್ಲಿ ಇನ್ಪೆಕ್ಟರುಗಳಾದ ಚಂದ್ರಶೇಖರ ಸಿ ಎಲ್, ಚಂದ್ರಶೇಖರ ಕೆ ಎನ್, ಅಮಾನುಲ್ಲಾ, ಸಿಬ್ಬಂದಿಗಳಾದ ವಿನಾಯಕ್, ಮಹೇಶ್, ಪಾಪಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ಬಿಜೆಪಿ ಯುವಮೋರ್ಚಾ ದ.ಕ. ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಪ್ರಮೋದ್ ದಿಡುಪೆ ಮರು ನೇಮಕ

Suddi Udaya

ಬ್ರಾಂಡೆಡ್ ಬಟ್ಟೆ ಖರೀದಿಗೆ ಸುವರ್ಣಾವಕಾಶ! ಶೇ.80 ರವರೆಗೆ ಬ್ರಾಂಡೆಡ್ ಬಟ್ಟೆಗಳ ಮೇಲೆ ಭಾರೀ ರಿಯಾಯಿತಿ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya
error: Content is protected !!