ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

ಮೂಡುಕೋಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಮೂಡುಕೋಡಿ ಒಕ್ಕೂಟದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ ನಡ್ತಿಕಲ್ಲು ಶ್ರೀರಾಮ ಭಜನಾ ಮಂದಿರದ ಸಭಾ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ. ಎಸ್. ಇವರು ನೆರವೇರಿಸಿ ಶುಭಕೋರಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪೂಜ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ವಹಿಸಿ ಸಹಕಾರ ನೀಡುದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಸುವರ್ಣ ಮಾತನಾಡಿ ಗ್ರಾಮೀಣ ಪ್ರದೇಶದ ಉನ್ನತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಿದೆ ಎನ್ನುತ್ತ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮೋಹನ್ ಅಂಡಿಂಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್,ಯೋಜನಾಧಿಕಾರಿ ದಯಾನಂದ, ಪಂಚಾಯತ್ ಸದಸ್ಯರಾದ ವೀಣಾ ಮತ್ತು ಉಮೇಶ್ ನಡ್ತಿಕಲ್ಲು, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್ ಪಿ. ಎಸ್,ಭಜನಾ ಮಂಡಳಿ ಅಧ್ಯಕ್ಷರಾದ ಪ್ರವೀಣ್ ಆಚಾರ್ಯ ಮಾಜಿ ಅಧ್ಯಕ್ಷರಾದ ಸದಾನಂದ ಪೂಜಾರಿ, ನೂತನ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ ಮತ್ತು ನಳಿನಾಕ್ಷಿ ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ಸಂಘದ ಸದಸ್ಯರನ್ನು ,ಹಿರಿಯರನ್ನು ಗೌರವಿಸಲಾಯಿತು. ಉತ್ತಮ ತಂಡಗಳಿಗೆ ಅಡಿಕೆ ಸಸಿ ಕೊಟ್ಟು ಪ್ರೋತ್ಸಾಹಿಸಲಾಯಿತು.

ಸೇವಾಪ್ರತಿನಿಧಿ ಸುನಿತಾ ಒಕ್ಕೂಟದ ವರದಿ ವಾಚಿಸಿದರು.ಮೇಲ್ವಿಚಾರಕರಾದ ಶಾಲಿನಿ ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಗೀತಾ ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಮುಂಡಾಜೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
error: Content is protected !!