23.6 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಅಂಡರ್ 18 ಮಹಿಳಾ ವಿಭಾಗದಲ್ಲಿ ಅಥ್ಲೆಟಿಕ್ಸ್ ಕ್ರೀಡಾ ಕೂಟದ ಡಿಸ್ಕಸ್ ಥ್ರೋ ವಿಭಾಗದಲ್ಲಿ ಸುಷ್ಮಾ ಬಿ ಪೂಜಾರಿ ಯೈಕುರಿ ನಾಲ್ಕೂರು ಇವರು ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗುಂಡೆಸೆತ ಮತ್ತು ಡಿಸ್ಕಸ್ ಥ್ರೋ ರಾಜ್ಯ ಮಟ್ಟದ ಸ್ಪರ್ದೇಯಲ್ಲಿ ಹಲವಾರು ಬಾರಿ ಭಾಗವಹಿಸಿ ಇದೀಗ 3ನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಆಳ್ವಾಸ್ ಕಾಲೇಜು ಮೂಡುಬಿದರೆಯಲ್ಲಿ ಬಿ‌‌.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಇವರು ಬಳಂಜ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಬಾಲಕೃಷ್ಣ ಪೂಜಾರಿ ಯೈಕುರಿ ಹಾಗೂ ಮಾಲಿನಿ ದಂಪತಿ ಪುತ್ರಿಯಾಗಿರುತ್ತಾರೆ.

Related posts

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗ್ರಾ.ಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿ

Suddi Udaya
error: Content is protected !!