September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಪುದುವೆಟ್ಟು : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜೂ.12 ರಂದು ಆಚರಿಸಲಾಯಿತು.


ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಹೋಟೆಲ್ ಇನ್ನಿತರ ಕಡೆಗಳಲ್ಲಿ ಕೆಲಸ ಕಾರ್ಯಗಳನ್ನು ಮಾಡುವಂಥದ್ದು ಅಪರಾಧ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಒತ್ತು ಕೊಟ್ಟು ಉತ್ತಮ ಪ್ರಜೆಗಳಾಗಬೇಕು ತಿಳಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ಪುದುವೆಟ್ಟು ಪರಿಸರದಲ್ಲಿ ಭವ್ಯ ಮೆರವಣಿಗೆಯೊಂದಿಗೆ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಘೋಷಣೆಗಳನ್ನು ಕೂಗುತ್ತ ಜಾಗೃತಿ ಮೂಡಿಸಲಾಯಿತು.

ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ: ಗೊಲ್ಲ(ಯಾದವ) ಸಮಾಜ ಸೇವಾ ಸಂಘ ಉದ್ಘಾಟನೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya
error: Content is protected !!