ಮೂಡುಕೋಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಮೂಡುಕೋಡಿ ಒಕ್ಕೂಟದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಸಮಾರಂಭ ನಡ್ತಿಕಲ್ಲು ಶ್ರೀರಾಮ ಭಜನಾ ಮಂದಿರದ ಸಭಾ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್ ಕೆ. ಎಸ್. ಇವರು ನೆರವೇರಿಸಿ ಶುಭಕೋರಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪೂಜ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ವಹಿಸಿ ಸಹಕಾರ ನೀಡುದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.
ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಸುವರ್ಣ ಮಾತನಾಡಿ ಗ್ರಾಮೀಣ ಪ್ರದೇಶದ ಉನ್ನತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಿದೆ ಎನ್ನುತ್ತ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಮೋಹನ್ ಅಂಡಿಂಜೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್,ಯೋಜನಾಧಿಕಾರಿ ದಯಾನಂದ, ಪಂಚಾಯತ್ ಸದಸ್ಯರಾದ ವೀಣಾ ಮತ್ತು ಉಮೇಶ್ ನಡ್ತಿಕಲ್ಲು, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಹರೀಶ್ ಪಿ. ಎಸ್,ಭಜನಾ ಮಂಡಳಿ ಅಧ್ಯಕ್ಷರಾದ ಪ್ರವೀಣ್ ಆಚಾರ್ಯ ಮಾಜಿ ಅಧ್ಯಕ್ಷರಾದ ಸದಾನಂದ ಪೂಜಾರಿ, ನೂತನ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ ಮತ್ತು ನಳಿನಾಕ್ಷಿ ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ಸಂಘದ ಸದಸ್ಯರನ್ನು ,ಹಿರಿಯರನ್ನು ಗೌರವಿಸಲಾಯಿತು. ಉತ್ತಮ ತಂಡಗಳಿಗೆ ಅಡಿಕೆ ಸಸಿ ಕೊಟ್ಟು ಪ್ರೋತ್ಸಾಹಿಸಲಾಯಿತು.
ಸೇವಾಪ್ರತಿನಿಧಿ ಸುನಿತಾ ಒಕ್ಕೂಟದ ವರದಿ ವಾಚಿಸಿದರು.ಮೇಲ್ವಿಚಾರಕರಾದ ಶಾಲಿನಿ ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಅಧ್ಯಕ್ಷರಾದ ಸದಾನಂದ ಪೂಜಾರಿಯವರು ಸ್ವಾಗತಿಸಿದರು. ಕಾರ್ಯದರ್ಶಿ ಗೀತಾ ಧನ್ಯವಾದವಿತ್ತರು.