ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಬೆಳ್ತಂಗಡಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಶಿರಾಜ್ ಶೆಟ್ಟಿ ಗೆ 25 ದಿನಗಳ ಬಳಿಕ ಸೆಷನ್ಸ್‌ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅದರಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಪ್ರಮೋದ್‌ ದಿಡುಪೆಗೂ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ.18 ರಂದು ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು.

ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ.18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು.ಬಂಧನ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ ಮಂಗಳೂರು ಸೆಷನ್ಸ್ ಕೋರ್ಟ್ ನಿಂದ ಜೂ.13 ರಂದು(ಇಂದು) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಮಾಡಿದ್ದಾರೆ. ಶಶಿರಾಜ್ ಶೆಟ್ಟಿ ಪರ ನ್ಯಾಯವಾದಿ ಮಹೇಶ್ ಕಜೆ ಕೋರ್ಟ್ ನಲ್ಲಿ ವಾದಿಸಿದರು.

ಅಕ್ರಮ ಗಣಿಗಾರಿಕೆ ಪ್ರಕರಣದ ಪ್ರಮುಖ ಆರೋಪಿ ಪ್ರಮೋದ್‌ ದಿಡುಪೆ ಪ್ರಕರಣದ ಬಳಿಕ ತಲೆಮರೆಕೊಂಡಿದ್ದ ಆತನಿಗೂ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. ಪ್ರಮೋದ್ ದಿಡುಪೆ ಪರ ವಕೀಲರಾದ ಶಂಭು ಶರ್ಮ ಮತ್ತು ಅಜಯ್‌ ಸುವರ್ಣ ವಾದಿಸಿದರು.

Leave a Comment

error: Content is protected !!