23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!