32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!