September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾ.ಪಂ. ನಲ್ಲಿಯೇ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನವಿ

ಬೆಳ್ತಂಗಡಿ: ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9/11 ಪ್ರಮಾಣ ಪತ್ರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಆದೇಶವನ್ನು ರದ್ದುಪಡಿಸಿ ಗ್ರಾಮ ಪಂಚಾಯತ್ ನಲ್ಲಿಯೇ ನೀಡುವಂತೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ಮನವಿ ಸಲ್ಲಿಸಿದರು.

ಈ ಹಿಂದೆ 9/11 ಪ್ರಮಾಣ ಪತ್ರವು ಗ್ರಾಮ ಪಂಚಾಯತ್ ನಲ್ಲಿ ನೀಡುತ್ತಿದ್ದು ಪ್ರಸ್ತುತ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರು 9/11 ಪಡೆಯಲು 80 ರಿಂದ 150 ಕಿಲೋಮೀಟರ್ ಪ್ರಯಾಣಿಸಬೇಕಾಗಿದೆ.

ಗ್ರಾಮೀಣ ಪ್ರದೇಶದ 9/11 ಪಡೆಯಲು ಸ್ಥಳೀಯ ಗ್ರಾಮ ಪಂಚಾಯತ್ ಗಳಿಗೆ ಅಧಿಕಾರವನ್ನು ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಶೇಖರ್ ಕುಕ್ಕೆಡಿ, ಪಕ್ಷದ ಪ್ರಮುಖರಾದ ಅಬ್ದುಲ್ ರಹಿಮಾನ್ ಪಡ್ಪು ಉಪಸ್ಥಿತರಿದ್ದರು.

Related posts

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya
error: Content is protected !!