ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಕಾಡಾನೆ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಘಟನೆ ಜೂ.13ರ ಮುಂಜಾನೆ ನಡೆದಿದೆ.
ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕಳೆದ ಎರಡು ತಿಂಗಳಿನಿಂದ ಈ ಸಲಗ ಚಾರ್ಮಾಡಿಯಲ್ಲಿ ಸುತ್ತಾಡುತ್ತಿದ್ದು, ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.