29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ