23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗೆ ಪೂರಕವಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆಯುವ  ಈ ಉಚಿತ ಬರವಣಿಗೆ ಪುಸ್ತಕಗಳ ವಿತರಣಾ ಕಾರ್ಯಕ್ರಮನ್ನು  ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ .ಎಸ್ ರವರು ನೆರವೇರಿಸಿ ಮಾತನಾಡಿ ಡಾ. ಎಸ್.ಸತೀಶ್ಚಂದ್ರ ರವರು ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಪೂಜ್ಯ ಖಾವಂದರು ಗ್ರಾಮೀಣ ಶಾಲೆಗಳಿಗೆ ಅನೇಕ ಸವಲತ್ತುಗಳನ್ನು ನೀಡುತ್ತಾ ಬಂದಿರುತ್ತಾರೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಜೀವನ ಶಿಕ್ಷಣ ನೀಡುವುದೇ  ಎಸ್. ಡಿ. ಎಂ.ಶಿಕ್ಷಣ ಸಂಸ್ಥೆಗಳ  ಮೂಲ ಉದ್ದೇಶ. ಈ ವರ್ಷ ಎಸ್ ಎಸ್ ಎಲ್ ಸಿ ಯಲ್ಲಿ ಎಸ್‌.ಡಿ.ಎಂ. ಶಿಕ್ಷಣ ಸಂಸ್ಥೆಗಳ ಶಾಲೆಗಳ ಮಕ್ಕಳು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಡೀ ಸಮುದಾಯವೇ ಶಾಲೆಯತ್ತ ಬರುವಂತಹ ಶಾಲೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯಕುಮಾರ್ ಮಾತನಾಡಿ ಪ್ರಾಥಮಿಕ ಶಾಲೆಯ ಮಕ್ಕಳು ಮುಗ್ದ ಮನಸ್ಸಿನ ಮಕ್ಕಳು ಈ ಮಕ್ಕಳಿಗೆ ಆರಂಭದಿಂದಲೇ ಉತ್ತಮ ಶಿಕ್ಷಣ ದೊರೆತಾಗ ಮುಂದೊಂದು ದಿನ ಸಮಾಜದಲ್ಲಿ ಉತ್ತಮ ಪ್ರಜೆಯಾ ಗುತ್ತಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿಕೊಂಡಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ಧನ್ಯವಾದವಿತ್ತರು.

ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಶ್ರೀಮತಿ ಪುಷ್ಪಲತಾ ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya
error: Content is protected !!