April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

ಕಾಶಿಪಟ್ಣ: ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಲ್ಲಿಸುವ ಗೌರವ ಪ್ರೇರಣೆಯಾಗಿ ಮಾರ್ಪಡುತ್ತದೆ. ಆ ಮೂಲಕ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಊರ ಶಿಕ್ಷಣ ಸಂಸ್ಥೆಯನ್ನು ಉಳಿಸಿ ಬೆಳೆಸಲು ಊರಿನ ಸಮಸ್ತ ನಾಗರೀಕರು ಏಕ ಮನಸ್ಸಿನಿಂದ ಶ್ರಮಿಸಬೇಕೆಂದು ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ಸ.ಪ್ರೌ. ಶಾಲೆ ಕಾಶಿಪಟ್ಣದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ವತಿಯಿಂದ ನಡೆದ 2023-24 ನೇ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳನ್ನು ಮತ್ತು ಶಿಕ್ಷಕರನ್ನು ಅಭಿನಂದಿಸಿ ಕರೆ ನೀಡಿದರು.

ಅಂಡಿಂಜೆ ಶಾಲಾ ಮುಖ್ಯ ಶಿಕ್ಷಕ ಶಿವಶಂಕರ ಭಟ್ ಅಭಿನಂದನ ಭಾಷಣ ಮಾಡಿ ಶೇಕಡಾ 100 ಫಲಿತಾಂಶ ದಾಖಲಿಸಲು ಕಾರಣಕರ್ತರಾದ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ವಿಶೇಷವಾಗಿ ಮಹತ್ತರ ಜವಾಬ್ದಾರಿ ನಿರ್ವಹಿಸಿದ ಪೋಷಕರನ್ನು ಪ್ರಶಂಸಿಸಿದರು. ನಂತರ ಶೇಕಡಾ 100 ಫಲಿತಾಂಶ ದಾಖಲಿಸಿದ ಎಲ್ಲಾ ವಿದ್ಯಾರ್ಥಿಗಳನ್ನು, ಶ್ರಮಿಸಿದ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಯವರನ್ನು ಗೌರವಿಸಲಾಯಿತು.

ಶಾಲಾ ಸುಣ್ಣ ಬಣ್ಣ ಮತ್ತು ಆಟದ ಮೈದಾನ ಸಮತಟ್ಟು ಕಾಮಗಾರಿಗೆ ಅನುದಾನ ನೀಡಿದ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ ಮತ್ತು ಉಪಾಧ್ಯಕ್ಷೆ ಶ್ರೀಮತಿ ಶುಭವಿ ಇವರನ್ನು ಶಾಲಾ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಯಶೋಧರ ಪೂಜಾರಿ ಶಾಲಾ ಪರವಾಗಿ ಗೌರವಿಸಿದರು. ಇತ್ತೀಚೆಗೆ ಅಗಲಿದ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ಇವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನಪ್ರಾರ್ಥನೆ ಮಾಡಲಾಯಿತು.

ಸತೀಶ್ ಕೆ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶಿಲ್ಪಾ, ಪಂಚಾಯತ್ ಸದಸ್ಯರಾದ ಅಶೋಕ್ ಕುಮಾರ್ ಜೈನ್, ರವೀಂದ್ರ, ಪಿಡಿಒ ಶ್ರೀಮತಿ ಆಶಾಲತಾ, ಕಾರ್ಯದರ್ಶಿ ಲೀನಾ ಬೆನಡಿಕ್ಟಾ ಲೋಬೋ, ಸಿ.ಆರ್.ಪಿ ಆರತಿ, ಶಾಲಾ ಸ್ಥಾಪಕ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಪ್ರವೀಣ್ ಪಿಂಟೋ, ಮಾವಿನಕಟ್ಟೆ ಶಾಲಾ ಮುಖ್ಯ ಶಿಕ್ಷಕ ಉಮೇಶ್ ನಾಯ್ಕ್, ಅಧ್ಯಾಪಕ ವೆಂಕಟೇಶ್ ನಾಯ್ಕ್, ಊರ ಹಿರಿಯರಾದ ಸುಬ್ಬಣ್ಣ ಪೂಜಾರಿ, ಸ್ಥಳೀಯ ಮಸೀದಿ ಅಧ್ಯಕ್ಷ ಕೆ.ಎಸ್ ಪುತ್ತುಮೋನು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕ ಶಶಿಧರ್ ಕೆ ಪ್ರಸ್ತಾವನೆಗೈದು ಸ್ವಾಗತಿಸಿದರು. ಶಿಕ್ಷಕ ದೇವುದಾಸ್ ನಾಯಕ್ ನಿರೂಪಿಸಿ ಶಿಕ್ಷಕಿ ಸೌಮ್ಯ ವಂದಿಸಿದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya
error: Content is protected !!