25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರವರನ್ನು ಜೆಸಿಐ ಭವನದಲ್ಲಿ ನಡೆದ ಮಧ್ಯಂತರ ಸಮ್ಮೇಳನದ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳಂಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸ್ವಾಗತಿಸಿದರು.

ಸನ್ಮಾನ ಪತ್ರವನ್ನು ಅನುಕ್ಷಾ ಶಿರ್ಲಾಲ್ ರವರು ವಾಚಿಸಿದರು.
ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ , ಪ್ರತೀಕ್ ವಿ ಎಸ್ ತಂದೆ ವಸಂತ ಶೆಟ್ಟಿ ಶ್ರದ್ದಾ, ಸಂತೋಷ್ ಪಿ ಕೋಟ್ಯಾನ್, ಪ್ರಶಾಂತ್ ಲಾಯಿಲ, ಉಪಾಧ್ಯಕ್ಷರುಗಳಾದ ಪ್ರೀತಮ್ ಶೆಟ್ಟಿ, ಆಶಾ ಪ್ರಶಾಂತ್, ಚಂದ್ರಹಾಸ್ ಬಳಂಜ, ಸುಧೀರ್ ಕೆ ಎನ್, ಶೈಲೇಶ್, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಹಾಗೂ ಜೆಸಿ ಜೆಜೆಸಿ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
error: Content is protected !!