ಪುದುವೆಟ್ಟು : ಶ್ರೀಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಜೂ 13 ರಂದು ಆರೋಗ್ಯ ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಮೇಲಿನಡ್ಕ ಉಪ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಭಾರತಿ ಇವರು ವಿದ್ಯಾರ್ಥಿಗಳಿಗೆ ಮಳೆಗಾಲ ಆರಂಭವಾಗುವ ಸಂದರ್ಭದಲ್ಲಿ ಬರಬಹುದಾದ ಕಾಯಿಲೆಗಳಾದ ಡೆಂಗ್ಯೂ, ಮಲೇರಿಯಾ ಇವುಗಳ ಬಗ್ಗೆ ಜಾಗೃತಿ ಮತ್ತು ವೈಯಕ್ತಿಕ ಶುಚಿತ್ವ ಮತ್ತು ಆರೋಗ್ಯಕರ ಅಭ್ಯಾಸಗಳ ಬಗ್ಗೆ ಅತ್ತ್ಯುತ್ತಮ ಮಾಹಿತಿ ನೀಡಿದರು .
ಕಾರ್ಯಕ್ರಮದ ಮಾರ್ಗದರ್ಶಕರಾದ ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಅಧ್ಯಾಪಕರಾದ ಪವನ್ ಕುಮಾರ್ ಧನ್ಯವಾದವಿತ್ತರು.
ಆಶಾ ಕಾರ್ಯಕರ್ತೆ ಶ್ರೀಮತಿ ಹರಿಣಾಕ್ಷಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.