September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು.

ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ನಾವು ಅವಕಾಶವನ್ನು ನೀಡುತ್ತೇವೆ. ಇದರ ಸದುಪಯೋಗ ಪಡೆದುಕೊಂಡು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಕರೆ ನೀಡಿದರು. ಎಲ್ಲಾ ಉಪನ್ಯಾಸಕರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಸ್ಥೆಯ ಶಿಸ್ತು ಹಾಗೂ ನಿಯಮಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 90ಕ್ಕಿಂತ ಅಧಿಕ ಅಂಕ ಗಳಿಸಿದ 9 ಮಂದಿ ವಿದ್ಯಾರ್ಥಿಗಳಿಗೆ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ. ಇವರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿ ರಕ್ಷಿತ್ ವೈ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿಜೇತ್ ಸ್ವಾಗತಿಸಿ, ಫಾತಿಮತುಲ್ ರಸೀನಾ ವಂದಿಸಿದರು.

Related posts

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

Suddi Udaya

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya
error: Content is protected !!