September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಉಜಿರೆ-ಧರ್ಮಸ್ಥಳ, ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು, ಶ್ರೀಮಾತಾ ನಾಲ್ಕೂರು, ಜ್ಯೋತಿ ಯುವತಿ ಮಂಡಲ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 15ರಿಂದ 21ರ ವರೆಗೆ ಉಚಿತ ಯೋಗ ಶಿಬಿರ ನಡೆಯಲಿದ್ದು ಇದರ ಉದ್ಘಾಟನೆಯು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಬಳಂಜದಲ್ಲಿ ನಡೆಯಿತು.

ಹಿರಿಯರು ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಅನಸೂಯ ದೀಪ ಬೆಳಗಿಸಿ ಉಚಿತ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್., ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ಅಳದಂಗಡಿ ಪ್ರಾ.ಕೃ.ಪ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ಪ್ರಮುಖರಾದ ಕರುಣಾಕರ ಹೆಗ್ಡೆ ಬೊಕ್ಕಸ, ಸದಾನಂದ ಸಾಲಿಯಾನ್ ಬಳಂಜ, ಸತೀಶ್ ಬರಮೇಲು, ಸಂಘದ ನಿರ್ದೇಶಕ ರಂಜಿತ್ , ಕಾರ್ಯದರ್ಶಿ ಜಗದೀಶ್ ಪೂಜಾರಿ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

ಯೋಗ ತರಬೇತಿಯನ್ನು ಡಾ.ಅಭಿಷೇಕ್ ಮತ್ತು ಸುಶ್ಮಿತಾ ಶೆಟ್ಟಿ ಉಜಿರೆ ಇವರು ನಡೆಸಿದರು.

ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಪ್ರತಿದಿನ ಬೆಳಿಗ್ಗೆ ಗಂಟೆ 5.30 ರಿಂದ 6.30 ಯೋಗ ಶಿಬಿರ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9900806088 ನಂಬರನ್ನು ಸಂಪರ್ಕಿಸಬಹುದು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya
error: Content is protected !!