28.6 C
ಪುತ್ತೂರು, ಬೆಳ್ತಂಗಡಿ
March 31, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜೂ.15ರಂದು ಕಾಶಿಬೆಟ್ಟುವಿನಲ್ಲಿ ಸಂಭವಿಸಿದೆ.

ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಕ್ಕೆ ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳ ಕಡೆ ಹೋಗುತ್ತಿದ್ದ ಇನೋವಾ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಮೂರು ವಾಹನಗಳಿಗೂ ಹಾನಿಯಾಗಿದ್ದು ಎರಡೂ ದ್ವಿಚಕ್ರ ವಾಹನಗಳಂತೂ ಸಂಪೂರ್ಣ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಗಾಯಗೊಂಡ ಇಬ್ಬರು ಸವಾರರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಆಗಮಿಸಿದ್ದಾರೆ.

Related posts

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಪದ್ಮುಂಜದಲ್ಲಿ ಅಕ್ರಮ ಗೋ ಸಾಗಾಟ: ವಾಹನ ಸಹಿತ ಆರೋಪಿ ಬಂಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!