ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ15 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಈ ಕಾರ್ಯಕ್ರಮವು ಎಲ್ಲರಿಗೂ ಅರ್ಥವನ್ನು ಕಲ್ಪಿಸುವ ಕಾರ್ಯಕ್ರಮವಾಗಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು.
ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರುಗಳಾದ ವಂ|ಸ್ವಾ ಒಸ್ಮಾಂಡ್ ರೋಶನ್ ಡಿಸೋಜ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಬಕ್ರೀದ್ ಹಬ್ಬವು ತ್ಯಾಗದ ಸಂಕೇತವಾಗಿದೆ, ನಾವೆಲ್ಲರೂ ನಮ್ಮ ಹೆತ್ತವರಿಗೆ, ಗುರುಗಳಿಗೆ ವಿಧೇಯತೆಯನ್ನು ತೋರಿಸಬೇಕು ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಕುಮಾರಿ ಅಸ್ನ ರವರು ನಿರೂಪಿಸಿ, ಮುಹೀನುದ್ದೀನ್ ರವರು ಸ್ವಾಗತಿಸಿ, ಕುಮಾರಿ ಆಯಿಷಾ ಸರ ರವರು ಧನ್ಯವಾದವಿತ್ತರು. ಕಾರ್ಯಕ್ರಮಕ್ಕೆ ಶಾಲಾ ಶಿಕ್ಷಕ- ಶಿಕ್ಷಕೇತರ ವೃಂದದವರು ಸಹಕರಿಸಿದರು.