28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

ಬೆಳ್ತಂಗಡಿ: ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯ ಅಲೆಕ್ಕಾಡಿ ಸಮೀಪದ ಪಿಜಾವು ಎಂಬಲ್ಲಿ ವಿದ್ಯುತ್ ಕಂಬದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಬಿದ್ದು ಮೃತಪಟ್ಟ ಘಟನೆ ಜೂ.17ರಂದು ನಡೆದಿದೆ.

ಕಂಬದಿಂದ ಬಿದ್ದು ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ ಪ್ರಕಾಶ್(29) ಎಂಬವರು ಮೃತಪಟ್ಟವರು.

ಗುತ್ತಿಗೆದಾರರ ಅಡಿಯಲ್ಲಿ ಲೈನ್ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಕಂಬ ಏರಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಪೈಕಿ ಪ್ರಕಾಶ್ ಕಂಬದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿ ಇರಿಸಲಾಗಿದೆ. ಕಾಮಗಾರಿ ನಡೆಯುತ್ತಿದ್ದ ಸಂದರ್ಭ ವಿದ್ಯುತ್ ಆಫ್ ಆಗಿತ್ತು. ಆದರೆ ವಿದ್ಯುತ್ ಶಾಕ್ ನಿಂದ ಬಿದ್ದಿರುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya
error: Content is protected !!