23.6 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

ಮಚ್ಚಿನ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 6 ವರ್ಷದ ಮಗುವಿನ ಪ್ರಾಣ ಕಾಪಾಡಲು ಆ್ಯಂಬುಲೆನ್ಸ್ ಚಾಲಕರೊಬ್ಬರು ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ಸಾರ್ವಜನಿಕರಿಂದ ಭಾರೀ ಶ್ಲಾಘನೆ ಪಡೆದ ಘಟನೆ ಜೂ.16ರಂದು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದಲ್ಲಿ ನಡೆದಿದೆ.

ವಿಟ್ಲ ನಿಡ್ಯ ಚೈತ್ರ ಪ್ರತಾಪ್ ದಂಪತಿಯ 6 ವರ್ಷದ ಪುತ್ರ ಆಯುಷ್ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಹೆಚ್ಚಿನ ಚಿಕಿತ್ಸೆ ನೀಡಲು ಮಂಗಳೂರಿನ ಕೆ.ಎಂ.ಸಿ ಅತ್ತಾವರ ಆಸ್ಪತ್ರೆಯಿಂದ ಬೆಂಗಳೂರು ಆಸ್ಪತ್ರೆಗೆ ವೀರಕೇಸರಿ ಆ್ಯಂಬುಲೆನ್ಸ್ ಮೂಲಕ ಹೊರಟ ಚಾಲಕ ದೀಕ್ಷಿತ್ 5 ಗಂಟೆಯಲ್ಲಿ ಬೆಂಗಳೂರು ತಲುಪಿದ್ದಾರೆ. ಆದರೆ ಬೆಂಗಳೂರಿನ ಆಸ್ಪತ್ರೆಯಿಂದ ಮಗುವನ್ನು ಪಾಂಡಿಚೇರಿಗೆ ಕರೆದೊಯ್ಯಲು ವೈದ್ಯರು ತಿಳಿಸಿದ್ದು ಮತ್ತೆ ಬೆಂಗಳೂರಿನಿಂದ ಮಗುವನ್ನು ಪಾಂಡಿಚೇರಿಗೆ ಆ್ಯಂಬುಲೆನ್ಸ್ ಮೂಲಕ ಕರೆತಂದಿದ್ದಾರೆ. ಅಲ್ಲಿಯೂ ಮಗುವಿಗೆ ತಾಂತ್ರಿಕ ದೋಷದಿಂದ ಚಿಕಿತ್ಸೆ ನೀಡಲಾಗದ ಕಾರಣ ಮತ್ತೆ ಅಲ್ಲಿಂದ ಚೆನೈ ಆಸ್ಪತ್ರೆಗೆ ಮಗುವನ್ನು ಸುರಕ್ಷಿತವಾಗಿ ತಲುಪಿಸಿದ್ದಾರೆ. ಇದೀಗ ಮಗುವಿಗೆ ಚೆನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬರೇ ಚಾಲಕರಾಗಿ 1640 ಕಿ.ಮಿ ದೂರವನ್ನು 14 ಗಂಟೆಗಳಲ್ಲಿ ತಲುಪಿದ ಜೀವ ರಕ್ಷಕ ದೀಕ್ಷಿತ್‌ಗೆ ಸಾರ್ವಜನಿಕರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಊರಿಗೆ ವಾಪಾಸ್ ಆಗಿರುವ ದೀಕ್ಷಿತ್ ಅವರನ್ನು ವೀರಕೇಸರಿ ಫ್ರೆಂಡ್ಸ್ (ರಿ) ತಂಡ ಹಾಗೂ ಊರವರು ಅಭಿನಂದಿಸಿದ್ದಾರೆ. ಅನೇಕರು ತಮ್ಮ ವಾಟ್ಸಾಪ್ ಸ್ಟೇಟಸ್ ಮೂಲಕ ಮಗುವಿನ ಪ್ರಾಣ ಉಳಿಸಲು ತಮ್ಮ ಜೀವ ಮುಡಿಪಾಗಿಟ್ಟ ದೀಕ್ಷಿತ್ ಅವರಿಗೆ ಶ್ರೀ ದೇವರು ಆಯುರಾರೋಗ್ಯ ನೀಡಲಿ ಎಂದು ಶುಭ ಹಾರೈಸಿದ್ದಾರೆ.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya
error: Content is protected !!